ಸಾರ್ವಜನಿಕರು ನಮ್ಮ ಮುಖಕ್ಕೆ ಮೊಟ್ಟೆ ಹೊಡೆಯುವ ದಿನಗಳು ದೂರವಿಲ್ಲ: ಕಿರಣ್ ಶಾ

ಮಂಗಳವಾರ, 24 ಮೇ 2016 (20:19 IST)
ನಗರದಲ್ಲಿ ಸಾಕಷ್ಟು ಮೂಲಸೌಕರ್ಯಗಳ ಕೊರತೆ ಇದೆ. ಸಾರ್ವಜನಿಕರು ಸಮಸ್ಯೆಗಳಿಂದ ಬೇಸತ್ತಿದ್ದಾರೆ. ಇನ್ನಾದರು ನಾವು ಎಚ್ಚೆತ್ತುಕೊಳ್ಳಬೇಕಾಗಿದೆ. ನಮ್ಮ ಕಾರ್ಯವೈಖರಿ ಹೀಗೆ ಮುಂದುವರೆದರೆ ಸಾರ್ವಜನಿಕರು ನಮ್ಮ ಮುಖಕ್ಕೆ ಮೊಟ್ಟೆ ಹೊಡೆಯುವ ದಿನಗಳು ದೂರವಿಲ್ಲ ಎಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂಮ್ ದಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಬೆಂಗಳೂರು ವಿಷನ್ ಗ್ರೂಪ್ ಸಕ್ರಿಯವಾಗಿ ಕೆಲಸ ಮಾಡುತ್ತಿಲ್ಲ ಎಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂಮ್‌ದಾರ್ ಶಾ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಷನ್ ಗ್ರೂಪ್ ಮೊದಲ ಸಭೆಯಲ್ಲಿ ಮಾತನಾಡಿದ ಕಿರಣ್ ಮಜೂಮ್ ದಾರ್, ಬೆಂಗಳೂರು ವಿಷನ್ ಗ್ರೂಪ್ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಸರಕಾರವನ್ನು ತರಾಟೆಗೆ ತಗೆದುಕೊಂಡು ಸರಕಾರದ ಕಾರ್ಯವೈಖರಿ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ