ಉಪ ಚುನಾವಣೆಯನ್ನ ಬಿಜೆಪಿ-ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿರುವ ನಡುವೆಯೇ ದೂರು, ಪ್ರತಿದೂರುಗಳು ದಾಖಲಾಗುತ್ತಿವೆ.
ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿದೆ.
ಹೀಗಂತ ಆರೋಪಿಸಿರುವ ಕಾಂಗ್ರೆಸ್ ಮುಖಂಡರಿಂದ ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು ದಾಖಲು ಮಾಡಲಾಗಿದೆ. ಪರವಾನಗಿ ಇಲ್ಲದೆ ಸಭೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಮೇ 4 ರಂದು ಚಿಂಚೋಳಿಯ ಸೋನಾಲಗಿರಿ ಪಂಗರಗ ಗ್ರಾಮದಲ್ಲಿ ನಡೆದ ಕಾರ್ಯಕ್ರಮಕ್ಕೆ ಪರವಾನಿಗೆ ಪಡೆದುಕೊಂಡಿರಲಿಲ್ಲ. ಶ್ರೀ ಪರ್ವತಲಿಂಗ ಪರಮೇಶ್ವರ ಮಾಹಾರಾಜರ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ಹೆಸರಲ್ಲಿ ಪರವಾನಗಿ ಪಡೆಯದೆ ಬಿಜೆಪಿ ಸಭೆ ನಡೆದಿದೆ.
ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪ ಮಾಡಲಾಗಿದೆ.
ಸಭೆಯಲ್ಲಿ ಸಂಸದ ಭಗವಂತ ಖೂಬಾ, ಉಮೇಶ ಜಾಧವ್, ಶಾಸಕ ಅಶ್ವಥ್ ನಾರಾಯಣ ಮತ್ತಿತರರು ಭಾಗಿಯಾಗಿದ್ರು.
ಸೋನಾಲಗಿರಿ ಮಠವನ್ನು ರಾಜಕೀಯ ಕ್ಕೆ ಬಳಸಿಕೊಳ್ಳಲಾಗುತ್ತಿದೆ. ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಿಂದ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ.