ನ.8ರಿಂದ ಎಲ್ಲಾ ಹಂತದ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಮಂಗಳವಾರ, 2 ನವೆಂಬರ್ 2021 (20:26 IST)
ನವೆಂಬರ್ 8 ರಿಂದ ಅನ್ವಯವಾಗುವಂತೆ ಎಲ್ಲಾ ಹಂತದ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಕೋವಿಡ್ ಸೋಂಕು ನಿಯಂತ್ರಣ ಹಿನ್ನೆಲೆ ಬಯೋಮೆಟ್ರಿಕ್ ಯಂತ್ರಗಳ ಪಕ್ಕದಲ್ಲಿ ಸ್ಯಾನಿಟೈಸರ್‌ಗಳನ್ನು ಇಡುವುದು ಕಡ್ಡಾಯವಾಗಿದೆ.
ಬಯೋಮೆಟ್ರಿಕ್ ಹಾಜರಾತಿ ಹಾಕುವ ಮೊದಲು, ಹಾಕಿದ ನಂತರ ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿದೆ.
ಬಯೋಮೆಟ್ರಿಕ್‌ನಲ್ಲಿ ಬೆರಳು ಇಡುವ ಮುನ್ನ ಉದ್ಯೋಗಿಗಳ ಕೈ ಶುಚಿಯಾಗಿದೆಯೇ ಎಂದು ಖಚಿಪಡಿಸಿಕೊಳ್ಳುವುದು ಇಲಾಖೆಯ ಮುಖ್ಯಸ್ಥರ ಜವಾಬ್ದಾರಿಯಾಗಿದೆ.
ಕೋವಿಡ್ ಸಾಂಕ್ರಾಮಿಕ ಹಿನ್ನೆಲೆ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು. ಹಾಜರಾತಿ ಹಾಕುವಾಗ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿದೆ. ಕೋವಿಡ್ ಮಾರ್ಗಸೂಚಿ ಕಡ್ಡಾಯ ಎಂದು ಆದೇಶಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ