ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದಾನೆ.ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗಿಲ್ಲ. ಪ್ರತಿಬಾರಿಯೂ ಒಂದೊಂದು ಕಾರಣ ನೀಡುತ್ತಿದ್ದಾನೆ. ತಂದೆಗೆ ಹುಷಾರಿಲ್ಲ, ತಾಯಿಗೆ ಹುಷಾರಿಲ್ಲ, ನನಗೆ ಹುಷಾರಿಲ್ಲ ಎಂದು ಕಾರಣ ನೀಡಿ ಸಿಐಡಿ ಪೊಲೀಸರ ವಿಚಾರಣೆಗೆ ಹಾಜರಾಗುತಿಲ್ಲ.
ಶ್ರೀಕಿ ಒಂದೂವರೆ ತಿಂಗಳ ಹಿಂದೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಹಾಗೂ ಮಲಗಲು ಮನೆಗೆ ಹೋಗುತ್ತಿದ್ದ. ವಿಚಾರಣೆ ನಡೆಸಲು ನಿಮ್ಹಾನ್ಸ್ ಗೆ ತೆರಳಿದ್ದ ಸಿಐಡಿ ತಂಡಕ್ಕೆ ಬೆದರಿಕೆ ಹಾಕಿದ್ದ. ಪೊಲೀಸರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದ. ಶ್ರೀಕಿ ಕಳ್ಳಾಟದಿಂದ ಬೇಸೆತ್ತ ಸಿಐಡಿ ಅಧಿಕಾರಿಗಳು ಶ್ರೀಕಿಯ ಹೆಲ್ತ್ ರಿಪೋರ್ಟ್ ನೀಡುವಂತೆ ವೈದ್ಯರಿಗೆ ಕೇಳಿದ್ದರು. ಆಗ ವೈದ್ಯರು ಶ್ರೀಕಿ ಸಹವಾಸವೇ ಬೇಡವೆಂದು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದರು. ಇದೀಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ಹಾಜರಾಗುತ್ತಿಲ್ಲ.