ಬಿಜೆಪಿ 254 ಕೋಟಿ ರೂಪಾಯಿ ಹಗರಣ
ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂಪಾಯಿ ಹಗರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಕೂರಿತು ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳ ಮಟ್ಟದಲ್ಲಿ 254 ಕೋಟಿ ಮೊತ್ತದ ಹಗರಣ ಮಾಡಲು ಮುಂದಾಗಿದ್ದು, ಈ ಕುರಿತು ಮೇ 5 ಹಾಗೂ 7 ರಂದು ವಿಧಾನಸಭೆ ಸ್ಪೀಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ನಂತರ ಸ್ಪೀಕರ್ ಅರನ್ನು ಭೇಟಿ ಮಾಡಿಯೂ ಈ ವಿಚಾರವಾಗಿ ಮನವಿ ಮಾಡಿದ್ದೆ. ಸ್ಪೀಕರ್ ಆದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆಯ ಮುಖ್ಯಸ್ಥರಾಗಿ ಸದನದ ಹಣವನ್ನು ಕಾಪಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಸಾರ್ವಜನಿಕರ ವಿರೋಧದ ನಡುವೆಯೂ ಇ ಅಧಿಕಾರಿಗಳು ವಿಧಾನಸಭೆಯ ಸಚಿವಾಲಯಗಳಲ್ಲಿ ಕಾಗದ ರಹಿತ ವ್ಯವಸ್ಥೆಯನ್ನು ತರುವ ಜವಾಬ್ದಾರಿಯನ್ನು ಕಿಯೋನಿಕ್ಸ್ ಎಂಬ ಖಾಸಗಿ ಕಂಪನಿಗೆ ನೀಡುವ ಮೂಲಕ ತಮ್ಮ ಜೇಬು ತುಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. 2017-18ರಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಆಯವ್ಯಯದಲ್ಲಿ ಕರ್ನಾಟಕ ವಿಧಾನಮಂಡಲದಲ್ಲಿ ನಗದು ರಹಿತ ಯೋಜನೆಯ ಇ-ವಿಧಾನ ಕಾರ್ಯಕ್ರಮ ಜಾರಿಗೊಳಿಸಲು ಪ್ರಾಥಮಿಕವಾಗಿ ಮೂಲಭೂತ ಸೌಕರ್ಯಗಳಿಗೆ 20 ಕೋಟಿ ರೂಪಾಯಿಗಳ ಬಿಡುಗಡೆ ಮತ್ತು ಈ ಯೋಜನೆಗೆ 250 ಕೋಟಿಗಳ ಅನುದಾನ ಘೋಷಣೆ ಮಾಡಿತ್ತು.ಆದ್ರೆ ಈ ಬಿಜೆಪಿ ಸರ್ಕಾರ ಖಾಸಗಿ ಕಂಪನಿಗೆ ಕೊಟ್ಟು ಜೇಜುತುಂಬಿಸುವ ಕೆಲಸ ಮಾಡುತ್ತಿದೆ. ಆದ್ದರಿಂದ ವಿಧಾನಸಭೆಯ ಸಭಾಧ್ಯಕ್ಷರಿಗೆ ಪತ್ರ ಬರೆದು ಸಾರ್ವಜನಿಕ ಹಿತದೃಷ್ಟಿಯಿಂದ 254 ಕೋಟಿಯ ಯೋಜನೆಯನ್ನು ಖಾಸಗಿಯವರಿಗೆ ನೀಡದಂತೆ ಮನವಿ ಮಾಡಲಾಗಿದೆ. ಸ್ಪೀಕರ್ ಅವರು ಅಧಿಕಾರಿಗಳ ತಪ್ಪು ಮಾಹಿತಿಯಿಂದ ದಾರಿ ತಪ್ಪಬಾರದು, ಕೇಂದ್ರದ ಮೇವಾ ಯೋಜನೆ ಜಾರಿ ಮಾಡಲಿ. ಸಾರ್ವಜನಿಕರ ಹಣ ಸಂರಕ್ಷಣೆಗೆ ಮುಂದಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಸ್ಪೀಕರ್ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಈ ವಿಚಾರವಾಗಿ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.