ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳಿಂದ ದಾಳಿ

ಬುಧವಾರ, 21 ಫೆಬ್ರವರಿ 2018 (07:11 IST)
ಮಂಗಳೂರು : ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಮಂಗಳೂರಿನ ಬೇಂಗ್ರೆಯಲ್ಲಿ ನಡೆದಿದೆ.


ಮಲ್ಪೆಯಲ್ಲಿ ನಡೆದ ಅಮಿತ್ ಶಾ ಸಮಾವೇಶ ಮುಗಿಸಿ ವಾಪಾಸಾಗುವ ವೇಳೆ ಬಸ್ ಅಡ್ಡಗಟ್ಟಿ ಚೂರಿಯಿಂದ ಇರಿದು ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಡಿಸಿಪಿ, ಎಸಿಪಿ, ಪಿಎಸ್ಐ ಸೇರಿದಂತೆ ಹಲವು ಪೊಲೀಸರಿಗೆ ಗಾಯಗಳಾಗಿವೆ. ಗುಂಪು ಚದುರಿಸಲು  ಪೊಲೀಸರು ಲಾಠಿಚಾರ್ಚ್ ಮಾಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಮೂವರು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ