ಬಿಜೆಪಿ ದಲಿತ ವಿರೋಧಿ: ದಿನೇಶ್ ಗುಂಡೂರಾವ್

ಶುಕ್ರವಾರ, 22 ಜುಲೈ 2016 (17:27 IST)
ಬಿಜೆಪಿ ದಲಿತ ವಿರೋಧಿ. ಪ್ರಧಾನಿ ನರೇಂದ್ರ ಮೋದಿ ಸರಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಗಂಭೀರವಾಗಿ ಆರೋಪಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಸರಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ವೇಶ್ಯೆಗೆ ಹೋಲಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಬಿಜೆಪಿ ಉಚ್ಚಾಟಿತ ನಾಯಕ ದಯಾಶಂಕರ್ ಸಿಂಗ್ ಅವರು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ವೇಶ್ಯೆಗೆ ಹೋಲಿಸಿರುವುದನ್ನು ಖಂಡಿಸಿ, ನಾಳೆ ನಗರದ ಮೌರ್ಯ ಸರ್ಕಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತದೆ ಎಂದು ಹೇಳಿದರು.
 
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಪರಿಗೌಡ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕುರಿತು ಆಲೋಚನೆ ನಡೆಯುತ್ತಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ