ಬಿಜೆಪಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ: ಖರ್ಗೆ ಆಕ್ರೋಶ

ಸೋಮವಾರ, 13 ಮಾರ್ಚ್ 2017 (13:00 IST)
ಬಹುಮತ ವಿಲ್ಲದಿದ್ದರೂ ವಾಮಮಾರ್ಗದಿಂದ ಸರಕಾರ ರಚಿಸಲು ಯತ್ನಿಸುತ್ತಿರುವ ಬಿಜೆಪಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆಕ್ರೋಷ ವ್ಯಕ್ತಪಡಿಸಿದ್ದಾರೆ.
 
ಗೋವಾ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತವಿಲ್ಲದಿದ್ದರೂ ಹಣಬಲ ತೋಳ್ಬಲ ಅಧಿಕಾರ ದುರುಪಯೋಗಪಡಿಸಿಕೊಂಡು ರಾಜ್ಯಪಾಲರ ಮೂಲಕ ಸರಕಾರ ರಚನೆಗೆ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
 
ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಿದೆ. ರಾಜ್ಯಪಾಲರು ದೊಡ್ಡ ಪಕ್ಷಕ್ಕೆ ಸರಕಾರ ರಚಿಸಲು ಆಹ್ವಾನಿಸುವುದು ಬಿಟ್ಟು ಕೇಂದ್ರ ಸರಕಾರದ ಒತ್ತಡದ ಮೇರೆಗೆ ಬಿಜೆಪಿ ಪಕ್ಷಕ್ಕೆ ಸರಕಾರ ರಚಿಸಲು ಆಹ್ವಾನಿಸಿದ್ದಾರೆ ಎಂದು ಗುಡುಗಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ ಪ್ರಜಾಪ್ರಭುತ್ವದ ಅರ್ಥವೇ ಗೊತ್ತಿಲ್ಲ. ಹಣಬಲ ಅಧಿಕಾರದ ಬಲದಿಂದ ಮೆರೆಯುತ್ತಿರುವವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ