ಬಿಜೆಪಿಯಿಂದ ಶಾಂತಿ, ಸಾಮರಸ್ಯಕ್ಕೆ ಧಕ್ಕೆ: ಸಚಿವ ರೈ

ಸೋಮವಾರ, 4 ಸೆಪ್ಟಂಬರ್ 2017 (15:54 IST)
ದಕ್ಷಿಣ ಕನ್ನಡ, ಮಂಗಳೂರು ಜಿಲ್ಲೆಯಲ್ಲಿ ಶಾಂತಿ ನೆಲೆಸಿದ ಸಂದರ್ಭದಲ್ಲಿ ಬಿಜೆಪಿ ಬೈಕ್ ರ್ಯಾಲಿ ಆಯೋಜಿಸಿರುವುದು ಜಿಲ್ಲೆಯ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ತರುವಂತಹದಾಗಿದೆ ಎಂದು ಸಚಿವ ರಮಾನಾಥ್ ರೈ ಹೇಳಿದ್ದಾರೆ.
ಬಿಜೆಪಿ ಆಯೋಜಿಸಿದ ಮಂಗಳೂರು ಚಲೋ ಕಾರ್ಯಕ್ರಮದಿಂದ ಸಾಮರಸ್ಯಕ್ಕೆ ಧಕ್ಕೆಯಾಗಲಿದೆ ಮಂಗಳೂರು ಚಲೋ ಕಾರ್ಯಕ್ರಮಕ್ಕೆ ತಮ್ಮ ಆಕ್ಷೇಪವಿದೆ ಎಂದು ತಿಳಿಸಿದ್ದಾರೆ.
 
ದಕ್ಷಿಣ ಕನ್ನಡ ಜಿಲ್ಲೆ ಬುದ್ದಿವಂತರ ಜಿಲ್ಲೆ ಎಂದು ಪ್ರಖ್ಯಾತವಾಗಿದೆ. ಈಗ ಜಿಲ್ಲೆ ಸಂಪೂರ್ಣ ಶಾಂತಿಯುತವಾಗಿದೆ. ಮಂಗಳೂರಿನಲ್ಲೂ ಯಾವುದೇ ಘರ್ಷಣೆಗಳು ನಡೆಯುತ್ತಿಲ್ಲ. ಇಂತಹ ಸಂದರ್ಭದಲ್ಲಿ ಬೈಕ್ ರ್ಯಾಲಿ ಆಯೋಜಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಕೆಲವು ಮತೀಯವಾದಿ ಶಕ್ತಿಗಳು ಸಾಮರಸ್ಯವನ್ನು ಕದಡುತ್ತಿವೆ. ನಮ್ಮ ಜಿಲ್ಲೆಯ ಬಗ್ಗೆ ಹೊರಜಗತ್ತಿಗೆ ಒಳ್ಳೆಯ ಅಭಿಪ್ರಾಯವಿಲ್ಲ. ಬಿಜೆಪಿಯ ಕೋಮುವಾದದಿಂದ ಜಿಲ್ಲೆಗಳಲ್ಲಿ ಶಾಂತಿಗೆ ಭಂಗವಾಗುತ್ತಿದೆ ಎಂದು ಸಚಿವ ರಮಾನಾಥ್ ರೈ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ