ಬಿಜೆಪಿಯವರು ಮೀಸಲಾತಿ ವಿರೋಧಿಗಳು: ಸಿಎಂ ಸಿದ್ದರಾಮಯ್ಯ ಕಿಡಿ

ಭಾನುವಾರ, 20 ಆಗಸ್ಟ್ 2017 (15:50 IST)
ಬಿಜೆಪಿಯವರು ಮೀಸಲಾತಿ ವಿರೋಧಿಗಳು. ಸುಪ್ರೀಂಕೋರ್ಟ್‌ನಲ್ಲಿ ಮೀಸಲಾತಿ ರದ್ದುಗೊಳಿಸಿ ಎಂದು ಅರ್ಜಿ ಸಲ್ಲಿಸಿದ ರಾಮಾಜೋಯಿಸ್ ಇವರ ರಾಜಗುರುಗಳು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನಗರದ ಟೌನ್‌ಹಾಲ್‌ನಲ್ಲಿ ದಿವಂಗತ ಮುಖ್ಯಮಂತ್ರಿ ದೇವರಾಜ್ ಅರಸು ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಹಾರ್ ಚುನಾವಣೆ ಸಂದರ್ಭದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡಾ ಮೀಸಲಾತಿ ರದ್ದುಗೊಳಿಸುವಂತೆ ಒತ್ತಡ ಹೇರಿದ್ದರು ಎಂದು ಗುಡುಗಿದ್ದಾರೆ.
 
ಅಮಿತ್ ಶಾ ನಾವು ಮೀಸಲಾತಿ ವಿರೋದಿಗಳು ಎಂದಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಹುನ್ನಾರ ನಡೆಸಿದೆ. ಆದರೆ, ಜಾತಿ ಇರುವವರೆಗೆ ಮೀಸಲಾತಿ ಇರುತ್ತದೆ. ಅಮಿತ್ ಶಾಗೆ ತಾಕತ್ತಿದ್ರೆ ಹಾಗೇ ಹೇಳಲಿ ನೋಡೋಣ ಎಂದು ಸವಾಲ್ ಹಾಕಿದರು.
 
ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ಬಿಜೆಪಿ ಮುಖಂಡ ಹಿಂದುಳಿದ ವರ್ಗಗಳಿಗಾಗಿ ಏನು ಮಾಡಿದ್ದಾರೆ ಎನ್ನುವುದನ್ನು ಹೇಳಲಿ. ಕೇವಲ ಬಾಯಲ್ಲಿ ಹೇಳುವುದಕ್ಕಿಂತ ಮಾಡಿ ತೋರಿಸಿ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ