ಪ್ರಜ್ವಲ್ ರೇವಣ್ಣ ಅಶ್ಲೀಲ ಪ್ರಕರಣದಲ್ಲಿ ಬಿಜೆಪಿಗೂ ಮುಜುಗರ: ಅರವಿಂದ ಲಿಂಬಾವಳಿ

Sampriya

ಗುರುವಾರ, 2 ಮೇ 2024 (19:08 IST)
Photo Courtesy X
ವಿಜಯಪುರ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ  ಮೈತ್ರಿ ಪಕ್ಷ ಬಿಜೆಪಿಗೂ ಮುಜುಗರವಾಗಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಬೇಸರ ವ್ಯಕ್ತಪಡಿಸಿದರು.

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಪ್ರಕರಣ ಸಂಬಂದ ಎಸ್‌ಐಟಿ ತಂಡ ರಚಿಸಿ ತನಿಖೆ ನಡೆಸುತ್ತಿದೆ. ತನಿಖೆಯಿಂದ ಸತ್ಯ ಹೊರ ಬರಲಿದ್ದು, ಪ್ರಜ್ವಲ್ ರೇವಣ್ಣ ಅಷ್ಟೇ ಅಲ್ಲ ತಪ್ಪು ಯಾರೇ ಮಾಡಿದ್ದರೂ ಅವರಿಗೆ ಸೂಕ್ತ ಶಿಕ್ಷೆಯಾಗಬೇಕು. ಈ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದರು.

ಇನ್ನೂ ಬೆಂಗಳೂರಿನಲ್ಲಿ ನಡೆದ  ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆರೋಪಿ ದೂರದ ಕೊಲ್ಕತ್ತಾ ನಗರದಲ್ಲಿ ಪತ್ತೆಯಾಗಿದ್ದಾನೆ. ಈ ಕೃತ್ಯದ ಹಿಂದೆ ಜಿಹಾದಿ ಕೈವಾಡದ ಶಂಕೆಯಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಅರುಣ ಶಹಾಪೂರ, ವಕ್ತಾರ ಸಂಜಯ ಪಾಟೀಲ ಕನಮಡಿ, ಈರಣ್ಣ ರಾವೂರ, ವಿಜಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ