ಕೇಂದ್ರ ಸಚಿವ ಸದಾನಂದಗೌಡ ಮಾತನಾಡಿ, ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿರುವುದು ನಿಜ. ಆದರೆ, ದೊಡ್ಡ ಮಟ್ಟದ ಗೊಂದಲಗಳಿಲ್ಲ. ಕೆಲವೇ ದಿನಗಳಲ್ಲಿ ಗೊಂದಲಗಳು ನಿವಾರಣೆಯಾಗಲಿವೆ ಎಂದು ಹೇಳಿಕೆ ನೀಡಿದ್ದರು.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಕೆ.ಎಸ್.ಈಶ್ವರಪ್ಪ ಆರೋಪಗಳನ್ನು ತಳ್ಳಿಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಆರೋಪಗಳನ್ನು ತಳ್ಳಿಹಾಕಿದ್ದಾರೆ.