ಟಿಪ್ಪು ಸುಲ್ತಾನ್ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಅರೆನಗ್ನ ಚಿತ್ರಗಳನ್ನು ವೀಕ್ಷಿಸಿದ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ರಾಜೀನಾಮೆ ನೀಡಬೇಕು ಎನ್ನುವ ಬಿಜೆಪಿ ಒತ್ತಡವನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸದಾ ಅಲ್ಪಸಂಖ್ಯಾತರನ್ನು ಗುರಿಯಾಗಿಸುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ವಿಧಾನಪರಿಷತ್‌ನಲ್ಲಿ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಪ್ರತಿಭಟನೆ ಆರಂಭಿಸಿ ಕೂಡಲೇ ಸಚಿವ ತನ್ವೀರ್ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಸದಸ್ಯರ ಪ್ರತಿಭಟನೆಯಿಂದ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸದಾ ಅಲ್ಪಸಂಖ್ಯಾತರನ್ನು ಗುರಿಯಾಗಿಸುತ್ತಿದೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಾಗಿದೆ ಎಂದು ಕಿಡಿಕಾರಿದರು.
ಯಾವುದೇ ಕಾರಣಕ್ಕೂ ಸಚಿವ ತನ್ವೀರ್ ಸೇಠ್ ಅವರ ರಾಜೀನಾಮೆಯನ್ನು ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.