ಸಿದ್ದು ಸರ್ಕಾರದ ವಿರುದ್ಧ ಬಿಜೆಪಿಗೆ ಮತ್ತೊಂದು ಹಿಂದೂ ವಿರೋಧಿ ಅಸ್ತ್ರ

Krishnaveni K

ಸೋಮವಾರ, 29 ಜನವರಿ 2024 (09:49 IST)
Photo Courtesy: Twitter
ಬೆಂಗಳೂರು: ಮಂಡ್ಯದಲ್ಲಿ ಹನುಮಾನ್ ಧ್ವಜ ಕೆಳಗಿಳಿಸಿದ ಪ್ರಕರಣ ಈಗ ರಾಜಕೀಯ ಕಾವು ಪಡೆದುಕೊಳ್ಳುತ್ತಿದೆ. ಬಿಜೆಪಿಗೆ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಸವಿನೆನಪಿಗಾಗಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾರಿಸಲಾಗಿತ್ತು. ಆದರೆ ಇದನ್ನು ಕೆಳಗಿಳಿಸಿ ಜಿಲ್ಲಾಡಳಿತ ರಾಷ್ಟ್ರಧ್ವಜ ಹಾರಿಸಿತ್ತು. ಆದರೆ ಹನುಮಾನ್ ಧ‍್ವಜ ತೆರವು ಮಾಡಿದ್ದಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೀಗ ರಾಜ್ಯ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಜೊತೆಗೆ ಜೆಡಿಎಸ್ ಕೂಡಾ ಸಾಥ್ ನೀಡಿದೆ.

ಇಂದಿನಿಂದ ಇದೇ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎಂದು ರಾಜ್ಯಾದ್ಯಂತ ಹೋರಾಟ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆರ್. ಅಶೋಕ್, ಡಾ.ಅಶ್ವತ್ಥನಾರಾಯಣ, ಛಲವಾದಿ ನಾರಾಯಣ ಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದರು.

 ಘಟನೆ ಕುರಿಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸರ್ಕಾರೀ ಜಾಗದಲ್ಲಿ ಧರ್ಮ ಸಂಬಂಧೀ ಧ್ವಜ ಹಾರಿಸಲು ಅವಕಾಶ ಕೊಡಲ್ಲ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡಾ ಹನುಮ ಧ‍್ವಜ ಕೆಳಗಿಳಿಸಿದ್ದು ತಪ್ಪಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಆದರೆ ಇದೀಗ ಕೆರೆಗೋಡು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿಯಿದೆ. ಈ ಘಟನೆ ರಾಜ್ಯ ಸರ್ಕಾರಕ್ಕೆ ದೊಡ್ಡ ಕಗ್ಗಂಟಾಗುವ ಸಾಧ‍್ಯತೆಯಿದೆ. ಬಿಜೆಪಿ ಮತ್ತು ಜೆಡಿಎಸ್ ಈ ವಿಚಾರವಾಗಿ ಬೃಹತ್ ಹೋರಾಟಕ್ಕೆ ಮುಂದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ