ಅವರು ಇಂದು ಉಡುಪಿಯಲ್ಲಿ ಈ ವಿಚಾರವಾಗಿ ಮಾತನಾಡಿ, ರಾಜ್ಯದಲ್ಲಿ ಶಿಕ್ಷಕರ ಹಾಗೂ ಪದವೀದರರ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್ ಪಕ್ಷದಿಂದ ಪದವೀಧರರ ಕ್ಷೇತ್ರದಲ್ಲಿ ಎಸ್ .ಪಿ ದಿನೇಶ್ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಕೆ .ಕೆ ಮಂಜುನಾಥ್ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಚುನಾವಣೆ ಸಂದರ್ಭ 8 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಜನರಿಗೆ ಭರವಸೆ ನೀಡಿ ಅಧಿಕಾರ ಹಿಡಿದಿತ್ತು.ಆದ್ರೆ ತನ್ನನಾಲ್ಕು ವರ್ಷಗಳ ಅವಧಯಲ್ಲಿ ಬರೇ 3.5ಕಲ್ಷ ಉದ್ಯೋಗ ಸೃಷ್ಟಿ ಮಾಡಿದೆ. ಅದೇ ಕರ್ನಾಟಕದಲ್ಲಿದ್ದ ಮಾಜಿ ಸಿ ಎಂ ಸಿದ್ದರಾಮಯ್ಯ ಸರಕಾರ ತನ್ನ ಐದು ವರ್ಷಗಳ ಆಡಳಿತದಲ್ಲಿ 4.5 ಲಕ್ಷ ಉದ್ಯೋಗ ಸೃಷ್ಟಿಮಾಡುವ ಮೂಲಕ ರಾಜ್ಯದಲ್ಲಿ ಐತಿಹಾಸಿಕ ದಾಖಲೆ ಸೃಷ್ಟಿ ಮಾಡಿದೆ ಎಂದರು.