ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿರುವ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಬಿಜೆಪಿ ಪಕ್ಷದ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಧನ ಹಾಗೂ ಮನೆ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ದೊರೆಯುವವರೆಗೂ ಬಿಜೆಪಿ ಹೋರಾಟ ನಡೆಸುತ್ತದೆ. ಪಕ್ಷದ ವತಿಯಿಂದ ಕಲ್ಲಪ್ಪ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದೇವೆ ಎಂದು ಹೇಳಿದರು.