ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ!

ಶನಿವಾರ, 13 ಅಕ್ಟೋಬರ್ 2018 (15:02 IST)
ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ ಆಗುತ್ತಂತೆ. ಹೀಗಂತ ಸುದ್ದಿ ಹರಿದಾಡಲಾರಂಭಿಸಿದೆ.

ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‌ಗೆ ಮತ ಹಾಕಲ್ಲ. ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸದಿದ್ದರೆ ಮಂಡ್ಯದಲ್ಲಿ ಜೆಡಿಎಸ್ ಗೆಲ್ಲುವುದು ಕಷ್ಟ ಎಂದು ಕೆಪಿಸಿಸಿ ಒಬಿಸಿ ವಿಭಾಗ ಪ್ರಧಾನ ಕಾರ್ಯದರ್ಶಿ ಕೊತ್ತತ್ತಿ ಸಿದ್ದಪ್ಪ, ರಾಜ್ಯ ಕಾಂಗ್ರೆಸ್ ಮಾಹಿತಿ  ತಂತ್ರಜ್ಞಾನ ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್ಎಂ.ರಾಜಪ್ಪ, ರಾಜ್ಯ ಕಾಂಗ್ರೆಸ್ ಕಾನೂನು ಘಟಕ ಉಪಾಧ್ಯಕ್ಷ ಕೆಎನ್.ನಾಗರಾಜು ಅವರಿಂದ ವರಿಷ್ಠರ ಗಮನಕ್ಕೆ ತರಲಾಗಿದೆ.

ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಲಾಗಿದ್ದು, ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳೆರೆಡು ಪ್ರತಿ ಗ್ರಾಮದಲ್ಲೂ ಪರಸ್ಪರ ವಿರೋಧಿಗಳಾಗಿದ್ದಾರೆ. ಇದುವರೆಗೂ ಎರಡು ಪಕ್ಷದವರು ವಿರೋಧಿಗಳಾಗಿ ಚುನಾವಣೆ ಎದುರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಕದಿದ್ದರೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಒಲವು ತೋರಿಸಬಹುದು.

ಹೀಗಂತ ಮಂಡ್ಯದಲ್ಲಿ ಜೆಡಿಎಸ್ ಪಕ್ಷ ಸೋಲುವ ಬಗ್ಗೆ ಸ್ವತಃ ಕಾಂಗ್ರೆಸ್ ಪಕ್ಷದ ಮುಖಂಡರಿಂದ ಎಚ್ಚರಿಕೆ ನೀಡುತ್ತಿರುವುದು ಹೊಸ ಬೆಳವಣಿಗೆಯಾಗಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ