ಬಿಜೆಪಿಯಿಂದ ಮಂಗಳೂರು ಚಲೋ: ಬೈಕ್ ಜಾಥಾಗೆ ಅನುಮತಿ ನಿರಾಕರಣೆ

ಮಂಗಳವಾರ, 5 ಸೆಪ್ಟಂಬರ್ 2017 (08:14 IST)
ಮಂಗಳೂರಿನಲ್ಲಿ ಆರೆಸ್ಸೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಸೆಪ್ಟೆಂಬರ್ 7ರಂದು `ಮಂಗಳೂರು ಚಲೋ’ ಹಮ್ಮಿಕೊಂಡಿದೆ. ಇದಕ್ಕಾಗಿ ಇವತ್ತಿನಿಂದಲೇ ಬೈಕ್ ಜಾಥಾ ಆರಂಭಿಸುತ್ತಿದೆ. ಆದರೆ, ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದು, ರಾಜ್ಯದ ಹಲವೆಡೆ ನಿಷೇಧಾಜ್ಞೆ ಹೇರಲಾಗಿದೆ.

ಬೆಳಗ್ಗೆ 10.30ಕ್ಕೆ ಫ್ರೀಡಂಪಾರ್ಕ್`ನಲ್ಲಿ ಬಿಜೆಪಿ ಯುವ ಮೋರ್ಚಾದ ಬೈಕ್ ರ್ಯಾಲಿಗೆ ಮಾಜಿ ಸಿಎಂ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಮಾಜಿ ಡಿಸಿಎಂ ಆರ್. ಅಶೋಕ್ ಸೇರಿದಂತೆ ಹಲವು ನಾಯಕರು  ಭಾಗವಹಿಸುತ್ತಿದ್ದಾರೆ. ಆದರೆ, ಕೋಲಾ ರ, ಹಾಸನ, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೊಲೀಸರು ಅನುಮತಿ ನಿರಾಕರಿಸಲಾಗಿದೆ. ಮಂಗಳೂರಿನಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿರುವವರಿಗೆ ನೋಟಿಸ್ ನೀಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಡಿಸಿಎಂ ಆರ್. ಅಶೋಕ್, ಸರ್ಕಾರ ನಮ್ಮ ಹೋರಾಟವನ್ನ ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ. ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿ ಅಧಿಕಾರ ಕಲೆದುಕೊಂಡರು. ಸಿಎಂ ಸಿದ್ದರಾಮಯ್ಯ ಸರ್ಕಾರ ಸಹ ಅದೇ ರೀತಿಯ ವರ್ತನೆ ತೋರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ