ತನಗೆ ಸೋಲು ಖಚಿತ ಎಂದ ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್
ಭಾನುವಾರ, 2 ಮೇ 2021 (11:57 IST)
ರಾಯಚೂರು : ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮತ ಎಣಿಕೆಗೆ ಇನ್ನು ಹಲವು ಸುತ್ತು ಇರುವಾಗಲೇ ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್ ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ತುರ್ವಿಹಾಳ್ ಅವರು ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಪ್ರತಾಪ್ ಗೌಡ ಪಾಟೀಲ್ ಮತ ಎಣಿಕೆ ಕೇಂದ್ರದಿಂದ ಹೊರನಡೆದಿದ್ದಾರೆ. ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆಯಿಂದ ಹಿನ್ನಡೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದೆ. ಮತದಾರರು ತಮ್ಮ ವಿರುದ್ಧ ಮತ ಹಾಕಿರುವುದು ಆಡಳಿತ ವಿರೋಧಿ ಅಲೆಯಿಂದ ಸ್ಪಷ್ಟವಾಗಿದೆ. ಬಹುತೇಕ ಕಡೆ ನಿರೀಕ್ಷೆಯಂತೆ ಮತ ಬಂದಿಲ್ಲ ಎಂದು ಅವರು ಹೇಳಿದ್ದಾರೆ.