ಬಿಜೆಪಿಯವರು ಅಕ್ರಮ ಹಣ ಸಂಗ್ರಹಿಸಿದ್ದಾರೆ : ಉಗ್ರಪ್ಪ

ಶನಿವಾರ, 28 ಜನವರಿ 2023 (18:59 IST)
ರಾಜ್ಯ ಬಿಜೆಪಿ ಪಕ್ಷದ  ನಾಯಕರು ಚುನಾವಣಾ ಅಕ್ರಮ ಎಸಗಿದ್ದಾರೆ. ಅವರು ಪ್ರತೀ ಕ್ಷೇತ್ರಗಳಲ್ಲಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಮತದಾರರಿಗೆ ನೀಡಲು ಮತ್ತು ಅಕ್ರಮ ಎಸಗಲು ಹಣ ಸಂಗ್ರಹಿಸಿ ಇಟ್ಟಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಸಂಸದ ವಿಎಸ್‌ ಉಗ್ರಪ್ಪ  ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಬಿಜೆಪಿಯ ಹಾಲಿ ಶಾಸಕ ರಮೇಶ್ ಜಾರಕಿಹೊಳಿ‌ ಬೆಳಗಾವಿಯಲ್ಲಿ ಸಾರ್ವಜನಿಕವಾಗಿ ಪ್ರತೀ ಮತದಾರರಿಗೆ 6 ಸಾವಿರ ಕೊಡ್ತೇವೆ ಎಂದು ಬಹಿರಂಗವಾಗಿ ಹೇಳಿ, ಹಣ ಕೊಟ್ಟು ಚುನಾವಣೆಯಲ್ಲಿ ಗೆಲ್ಲುವ ಪ್ರಯತ್ನ ಮಾಡ್ತೇವೆ ಎಂದು ಹೇಳಿದ್ದಾರೆ‌. ಯಾರು ಎಷ್ಟು ಖರ್ಚು ಮಾಡ್ತಾರೋ, ಅದರ ಎರಡು ಪಟ್ಟು ಖರ್ಚು ಮಾಡ್ತೇವೆ ಎಂದು ಹೇಳಿದ್ದಾರೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಜೆಪಿ ನಡ್ಡಾ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಸಹಮತವಿದೆ ಎಂದು ಉಗ್ರಪ್ಪ ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ