ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿದೆ : ನಿಖಿಲ್ ಕುಮಾರಸ್ವಾಮಿ

ಶುಕ್ರವಾರ, 28 ಏಪ್ರಿಲ್ 2023 (11:49 IST)
ರಾಮನಗರ : ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಬಿಜೆಪಿ ಹಾಗೂ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಸ್ವತಃ ಕಾಂಗ್ರೆಸ್ ಅಭ್ಯರ್ಥಿಯೇ ಬಿಜೆಪಿಗರ ಮತನೀಡಿ ಆದ್ರೆ ಜೆಡಿಎಸ್ಗೆ ಮತಹಾಕಬೇಡಿ ಎಂದು ಪ್ರಚಾರ ಮಾಡ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
 
ರಾಮನಗರ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು. ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಮಾತನಾಡಿ,

ನನ್ನನ್ನು ಸೋಲಿಸಬೇಕು ಅಂತ ಬಿಜೆಪಿ-ಕಾಂಗ್ರೆಸ್ ಒಂದಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡು ನನ್ನನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದಾರೆ. ಕ್ಷೇತ್ರದ ಹಲವೆಡೆ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿಗೆ ಮತ ಹಾಕಿ ಅಂದಿದ್ದಾರೆ ಎಂದು ಕಿಡಿಕಾರಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ