ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಷಡ್ಯಂತ್ರ : ಸಿಎಂ ಸಿದ್ದರಾಮಯ್ಯ
ಭಾನುವಾರ, 26 ಫೆಬ್ರವರಿ 2017 (16:22 IST)
ಡೈರಿ ಆರೋಪ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಷಡ್ಯಂತ್ರ ನಡೆಯುತ್ತಿದೆ. ಇದರಲ್ಲಿ ಕೇಂದ್ರ ಬಿಜೆಪಿ ಕೈಜೋಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಹಿರಿಯ ಸಚಿವರನ್ನು ಕೈಬಿಡುವ ಪ್ರಶ್ನೆಯೇ ನಮ್ಮ ಮುಂದಿಲ್ಲ. ಅಂತಹ ಪ್ರಸ್ತಾವನೆ ಬಂದಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ವಿರುದ್ಧದ ಷಡ್ಯಂತ್ರದಲ್ಲಿ ಬಿಜೆಪಿ ಯಶಸ್ಸುಗಳಿಸಲ್ಲ. ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸರಕಾರದ ವಿರುದ್ಧ ಮಾಡಲು ಯಾವುದೇ ವಿಷಯಗಳಿಲ್ಲ. ಆದ್ದರಿಂದ, ಯಾವುದೋ ಡೈರಿಯನ್ನಿಟ್ಟುಕೊಂಡು ಕೀಳು ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನನ್ನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಿದಲ್ಲಿ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.