ಬಿಜೆಪಿ ಕಾರ್ಯಕಾರಣಿ ಸಭೆ: ಉದ್ಯಾನ ನಗರಿಗೆ ಪ್ರಧಾನಿ ಮೋದಿ ಆಗಮನ ?!

ಗುರುವಾರ, 2 ಏಪ್ರಿಲ್ 2015 (11:43 IST)
ಇಂದಿನಿಂದ ಮೂರು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪೂರ್ವಭಾವಿಯಾಗಿ ನಗರದ ಅಶೋಕ ಹೋಟೆಲ್‌ನಲ್ಲಿ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಲಾಗುತ್ತಿದೆ. 
 
ಸಭೆಗೆ ಪಕ್ಷದ ಹಿರಿಯ ನಾಯಕ, ಪರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದ್ದು, ಸಭೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ವೆಂಕಯ್ಯ ನಾಯ್ಡು, ಅನಂತ ಕುಮಾರ್, ಸದಾನಂದಗೊಡ, ಪಕ್ಷದ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಆಡಲಿತವಿರುವ ಇತರೆ ರಾಜ್ಯಗಳ ಮುಖ್ಯಮಂತ್ರಿಗಳು, ಪಕ್ಷದ ಪ್ರಧಾನ ಕಾರ್ಯದರ್ಶಿಗಳೂ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಭಾಗವಹಿಸಿದ್ದಾರೆ. 
 
ಇನ್ನು ಮೂರು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕಾರಿಣಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಕೇಂದ್ರ ಬಿಂದುವಾಗಿದ್ದು, ಇಂದು ಮಧ್ಯಾಹ್ನ 12.30ಕ್ಕೆ ಆಗಮಿಸಿ ಸಬೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ನಾಲ್ಕಕ್ಕೆ ಪಕ್ಷದ ವಿವಿಧ ನಾಯಕರೊಂದಿಗೆ ಮಾತುಕತೆ ನಡೆಸಲಿರುವ ಮೋದಿ, ರಾತ್ರಿ 8 ಗಂಟೆಗೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. 
 
ದಕ್ಷಿಣ ಭಾರತವನ್ನು ಗಮನದಲ್ಲಿಟ್ಟುಕೊಂಡು ನಡೆಯಸಲಾಗುತ್ತಿರುವ ಈ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಬಲವರ್ಧನೆಗೆ ಆದ್ಯತೆ ನೀಡಲಾಗುತ್ತಿದ್ದು, ಭವಿಷ್ಯದ ಹಿತದೃಷ್ಟಿಯಿಂದ ಕೆಲವು ಅಜೆಂಡಾಗಳನ್ನು ರೂಪಿಸಲಾಗುತ್ತದೆ ಎನ್ನಲಾಗಿದೆ. ಪ್ರಧಾನಿ ಮೋದಿ ಅವರು ನಾಳೆ ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎನ್ನಲಾಗಿದೆ. 
 
ಇನ್ನು ಪ್ರಧಾನಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

ವೆಬ್ದುನಿಯಾವನ್ನು ಓದಿ