ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಕೊನೆವರೆಗೂ ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಿಸಿದೆ.
ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಕ್ಷೇತ್ರಕ್ಕೆ ಬಿ.ವಿ.ನಾಯಕ್ ಅವರನ್ನು ಹುರಿಯಾಳುಗಳನ್ನಾಗಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಚನ್ನಬಸಪ್ಪಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ.