ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ರಾಜ್ಯಮಟ್ಟದ ತಂಡಗಳನ್ನ ರಚಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೋರ್ ಕಮಿಟಿ ಸದಸ್ಯರ ಸಭೆಯಲ್ಲಿ ಚರ್ಚಿಸಿ ಈ ತಂಡಗಳನ್ನು ರಚಸಲಾಗಿದ್ದು, ಮುಂಬರುವ ಚುನಾವಣೆಗೆ ಈಗಿನಿಂದಲೇ ಬಿಜೆಪಿ ಸಖತ್ ತಯಾರಿ ಮಾಡಿಕೊಳ್ಳುತ್ತಿದೆ.