ಕೇಂದ್ರದಲ್ಲಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿದೆ- ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ

ಶುಕ್ರವಾರ, 11 ಡಿಸೆಂಬರ್ 2020 (11:29 IST)
ಮೈಸೂರು : ಕೇಂದ್ರದಲ್ಲಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಸರ್ಕಾರ ಅಲ್ಲಾಡುತ್ತೆ, ಬೀಳುತ್ತೆ ಎಂಬ ಹೇಳಿಕೆ ವಿಚಾರ ರಾಜಕೀಯ ಪ್ರಬುದ್ಧತೆ ಇಲ್ಲದವರು ಈ ರೀತಿ ಹೇಳುತ್ತಾರೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಸದೃಢವಾಗಿದೆ. ಬಿಜೆಪಿ ಸರ್ಕಾರ ಬೀಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿಎಂ ಬದಲಾವಣೆ ಬಿಜೆಪಿ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಅವರು ತಿಳಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ