ಬಿಜೆಪಿಯಿಂದ ಬೆಂಗಳೂರಿನ ಗೌರವ ಹಾಳು- ಡಿಸಿಎಂ ಡಿ.ಕೆ. ಶಿವಕುಮಾರ್‌

geetha

ಭಾನುವಾರ, 3 ಮಾರ್ಚ್ 2024 (15:02 IST)
ಬೆಂಗಳೂರು :ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ತನಿಖಾ ಸಂಸ್ಥೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ನುಡಿದ ಡಿ.ಕೆ .ಶಿವಕುಮಾರ್‌ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದರು. ಬಿಜೆಪಿ ತನ್ನ ಅವಧಿಯಲ್ಲಿ ನಡೆದ ಎಲ್ಲಾ ಪ್ರಕರಣಗಳನು ಮರೆತುಬಿಟ್ಟಿದೆ. ಈಗ ರಾಜಕೀಯಕ್ಕಾಗಿ ವೃಥಾ ವಿವಾದ ಸೃಷ್ಟಿಸಲು ಯತ್ನಿಸುತ್ತಿದೆ. ಈ ವಿಷಯದಲ್ಲಿ ನಾನು ಯಾವುದೇ ರಾಜಕಾರಣ ಮಾಡಲು ಬಯಸುವುದಿಲ್ಲ ಎಂದು ಡಿಕೆಶಿ ಹೇಳಿದರು. 

ರಾಮೇಶ್ವರಂ ಕೆಪೆ ಸ್ಫೋಟ ಪ್ರಕರಣದಲ್ಲಿ ಅನಗತ್ಯ ರಾಜಕಾರಣ ಮಾಡುವ ಮೂಲಕ ಬಿಜೆಪಿ ಬೆಂಗಳೂರಿನ ಹೆಸರನ್ನು ಹಾಳು ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು. ಜೊತೆಗೆ ಬಿಜೆಪಿ ಬೆಂಗಳೂರಿನೊಡನೆ ಕರ್ನಾಟಕ, ಕನ್ನಡಿಗರ ಗೌರವಕ್ಕೂ ಕುಂದು ತರುತ್ತಿದ್ದು, ಅವರ ಗೌರವವನ್ನೇ ಅವರು ಹಾನಿಗೊಳಪಡಿಸುತ್ತಿದ್ದಾರೆ ಎಂದು ಟೀಕಿಸಿದರು. 

ಪ್ರಕರಣಕ್ಕೆ ಸಂಬಂಧಿಸಿದಂತೆ ಸಧ್ಯಕ್ಕೆ ಯಾವುದೇ ಮಾಹಿತಿ ನೀಡುವಂತಿಲ್ಲ ನೀಡಲೂ ಬಾರದು. ತನಿಖೆ ಮುಂದುವರೆದಂತೆ ಎಲ್ಲವೂ ಜನರಿಗೆ ತಿಳಿಸಲಾಗುವುದು ಎಂದು ಡಿಸಿಎಂ ನುಡಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ