ಅಕ್ಟೋಬರ್ 2 ರಿಂದ ಅಕ್ಟೋಬರ್ 31ರವರೆಗೆ ಬಿಜೆಪಿ ಪಾದಯಾತ್ರೆ

ಶನಿವಾರ, 14 ಸೆಪ್ಟಂಬರ್ 2019 (13:08 IST)
ಬೆಂಗಳೂರು : ಅಕ್ಟೋಬರ್ 2 ರಿಂದ ಅಕ್ಟೋಬರ್ 31ರವರೆ ಬಿಜೆಪಿ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬಿಜೆಪಿ ಸಂಸದರಿಲ್ಲದ ಕಡೆ ಪರಾಜಿತ ಅಭ್ಯರ್ಥಿಗಳು ಪಾದಯಾತ್ರೆ ಕೈಗೊಂಡಿದ್ದಾರೆ ಎನ್ನಲಾಗಿದೆ.




ಸಚಿವರು, ಶಾಸಕರ ಜೊತೆ ಪಾದಯಾತ್ರೆ ಮಾಡುವಂತೆ ಬಿಜೆಪಿ ಹೈಕಮಾಂಡ್ ನಿಂದ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಎಲ್ಲಾ ಬಿಜೆಪಿ ಸಂಸದರಿಂದ 150 ಕಿ.ಮೀ ಪಾದಯಾತ್ರೆ ಮಾಡಲಿದ್ದಾರೆ. 


ಪಕ್ಷ ಸಂಘಟನೆ, ಸ್ಥಳೀಯರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಉದ್ದೇಶದಿಂದ ಬಿಜೆಪಿ ಈ ಪಾದಯಾತ್ರೆ ಕೈಗೊಂಡಿದ್ದು, ಗಾಂಧಿ ಜಯಂತಿಯಂದು ಆರಂಭವಾಗಲಿರುವ ಪಾದಯಾತ್ರೆ, ಸರ್ದಾರ್ ಪಾಟೀಲ್ ಜಯಂತಿಯಂದು ಅಂತ್ಯವಾಗಲಿದೆ ಎನ್ನಲಾಗಿದೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ