ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ : ಶಿವಕುಮಾರ್
ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಾರದು ಎಂಬ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯವರು ಏನೇ ಮಾಡಲಿ, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಹೋರಾಟ ಮಾಡುತ್ತೇವೆ.