ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಕಸುಬಾಗಿದೆ: ಸಚಿವ ಜಾರ್ಜ್

ಸೋಮವಾರ, 28 ಆಗಸ್ಟ್ 2017 (13:13 IST)
ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಕಸುಬಾಗಿದೆ. ಸುಳ್ಳು ಆರೋಪಗಳನ್ನು ಮಾಡಿ ಸರಕಾರದ ತೇಜೋವಧೆಗೆ ಮುಂದಾಗಿದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ಡಿವೈಎಸ್‌ಪಿ ಎಂ.ಕೆ. ಗಣಪತಿಯವರ ಫೋನ್‌ಕಾಲ್‌ಗಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಒಂದು ವೇಳೆ ಪುರಾವೆಗಳಿದ್ದಲ್ಲಿ ತೋರಿಸಲಿ. ಇಲ್ಲವಾದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್‌ಗೆ ಪುರಾವೆಗಳನ್ನು ಸಲ್ಲಿಸಲಿ ಎಂದು ಸವಾಲ್ ಹಾಕಿದ್ದಾರೆ.
 
ಗಣಪತಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸಾಕ್ಷ್ಯಗಳನ್ನು ತಿರುಚಲಾಗಿದೆ ಎನ್ನುವ ಆರೋಪಗಳಲ್ಲಿ ಸತ್ಯಾಂಶವಿಲ್ಲ. ಒಂದು ವೇಳೆ ದಾಖಲೆಗಳಿದ್ದಲ್ಲಿ ಬಹಿರಂಗಪಡಿಸಲಿ. ಕೇವಲ ಆರೋಪಗಳನ್ನು ಮಾಡುವುದೇ ಬಿಜೆಪಿ ನಾಯಕರ ಕಾಯಕವಾಗಿದೆ ಎಂದು ಕಿಡಿಕಾರಿದ್ದಾರೆ.
 
ಸಿಐಡಿ ವರದಿಯನ್ನು ವಿರೋಧಿಸಿ ದಾಖಲಿಸಿದ ದೂರಿನ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ಗೊತ್ತಿಲ್ಲವೇ? ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ