ಬಿಜೆಪಿ ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ: ಗೃಹ ಸಚಿವ ಪರಮೇಶ್ವರ ಟಾಂಗ್

Sampriya

ಶನಿವಾರ, 18 ಮೇ 2024 (17:18 IST)
ತುಮಕೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ. ಎಲ್ಲವನ್ನೂ ನಿಯಂತ್ರಣದಲ್ಲೇ ಇಟ್ಟಿದ್ದೇವೆ ಎಂದು ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಬಿಜೆಪಿಯವರು ಎಷ್ಟೇ ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಪ್ರಯತ್ನಿಸಿದರು ಅದನ್ನು ನಿಯಂತ್ರಣ ಮಾಡುವ ಶಕ್ತಿ ಸರ್ಕಾರಕ್ಕಿದೆ. ಜನರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧ ಎಂದರು.

ಬಿಜೆಪಿ ಸರ್ಕಾರದಲ್ಲಿ ಎಷ್ಟು ಕೊಲೆಗಳು ನಡೆದಿದ್ದವು. ನಮ್ಮ ಸರ್ಕಾರದ ಅವಧಿಯಲ್ಲಿ ಎಷ್ಟು ನಡೆದಿವೆ ಎಂಬ ಅಂಕಿ ಸಂಖ್ಯೆ ಬಿಡುಗಡೆ ಮಾಡಲಾಗುವುದು. ಆಗ ಯಾರ ಅವಧಿಯಲ್ಲಿ ಹೆಚ್ಚು ಕೊಲೆಗಳು ನಡೆದಿದ್ದವು ಎಂಬುದು ಜನರಿಗೆ ಗೊತ್ತಾಗುತ್ತದೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ