ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬಿ.ಜೆ.ಪಿ ಸೋಲಿನ ಭೀತಿ

ಗುರುವಾರ, 21 ಅಕ್ಟೋಬರ್ 2021 (21:01 IST)
ಬೆಂಗಳೂರು: ಕೋವಿಡ್ ನಿಯಂತ್ರಣ, ರೈತರ ಸಮಸ್ಯೆ, ಆರ್ಥಿಕತೆ, ಉದ್ಯೋಗ ಸೃಷ್ಟಿ, ರಸ್ತೆ ದುರಸ್ತಿ ಎಲ್ಲ ಕ್ಷೇತ್ರಗಳಲ್ಲಿ ವಿಫಲವಾಗಿರುವ ಬಿಜೆಪಿಗೆ ಸೋಲಿನ ಭೀತಿಯಿದೆ. ಇಸಲೇ ಬಿಬಿಎಂಪಿ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಪದೇಪದೇ ಮುಂದೂಡಲಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಪ್ರಕಟಣೆಯಲ್ಲಿ ದಾಖಲಾಗಿದೆ.
 
ಬಿಬಿಎಂಪಿಯ ವಾರ್ಡ್‌ಗಳ ಮರುವಿಂಗಡಣೆ ಕಾರ್ಯವು ಆಮೆಗತಿಯಲ್ಲಿ ಸಾಗುತ್ತಿದೆ. ಕಳೆದ 13 ತಿಂಗಳಿನಿಂದ ಜನಪ್ರತಿನಿಧಿಗಳ ಬದಲಾಗಿ ಮಹಾನಗರ ಪಾಲಿಕೆಗೆ ಮನಸೋಇಚ್ಛೆ ಮುನ್ನಡೆಸಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಯಾಗಿದೆ. ಚುನಾವಣೆ ಮುಂದೂಡಲು ಪದೇಪದೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಮೂಲಕ ನ್ಯಾಯಾಲಯದ ಮೂಲ್ಯ ಸಮಯವನ್ನೂ ಬಿಜೆಪಿ ಹಾಳು ಮಾಡುತ್ತಿದೆ. ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯನ್ನು ಇನ್ನಷ್ಟು ತಿಂಗಳು ಮುಂದೂಡುವ ಉದ್ದೇಶದಿಂದಲೇ ಕ್ಷೇತ್ರ ಮರುವಿಂಗಡಣೆಗೆ ಸರ್ಕಾರ ಪ್ರತ್ಯೇಕ ಆಯೋಗ ರಚಿಸಿದೆ ಎಂದು ಪೃಥ್ವಿ ರೆಡ್ಡಿ ಕಿಡಿಕಾರಿದ್ದಾರೆ.
 
ಕೋವಿಡ್ ಸಂದರ್ಭದಲ್ಲಿ ಬೆಡ್, ಆಕ್ಸಿಜನ್ ಸೌಲಭ್ಯ ಕಲ್ಪಿಸಲು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರಿತು. ಪೆಟ್ರೋಲ್, ಡಿಸೆಲ್, ಎಲ್ಪಿಜಿ, ಅಡುಗೆ ಎಣ್ಣೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಉದ್ಯೋಗ ಸೃಷ್ಟಿಯಲ್ಲೂ ಸರ್ಕಾರ ವಿಫಲವಾಗಿದೆ, ದೇಶದೆಲ್ಲೆಡೆ ನಿರುದ್ಯೋಗ ತಾಂಡವವಾಡುತ್ತಿದೆ. ದೇಶದ ಅರ್ಥ ವ್ಯವಸ್ಥೆ ಕುಸಿದು ಹೋಗಿದೆ. ದೇಶದ ಸಾಲದ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ರಸ್ತೆಗಳಿಗೆ ಹೊಸದಾಗಿ ಡಾಂಬರು ಹಾಕುವುದು ಹಾಗಿರಲಿ, ಗುಂಡಿಗಳಿಗೆ ವೈಜ್ಞಾನಿಕ ವಿಧಾನದಲ್ಲಿ ತೇಪೆ ಹಾಕಲೂ ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಸಣ್ಣ ಮಳೆಗೂ ತೇಪೆ ಕಿತ್ತುಹೋಗುತ್ತಿದೆ. ಹೀಗೆ ಎಲ್ಲದರಲ್ಲೂ ವಿಫಲವಾಗಿರುವ ಬಿಜೆಪಿಗೆ ಸೋಲಿನ ಭೀತಿಯಿದೆ. ಹೀಗೆ ಏನಾದರೊಂದು ಕಾರಣ ಹುಡುಕಿಕೊಂಡು ಚುನಾವಣೆಗಳನ್ನು ಮುಂದೂಡಲಾಗುತ್ತಿದೆ ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.
bbmp

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ