ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಿಜೆಪಿ ಮುಖಂಡ

ಸೋಮವಾರ, 24 ಜುಲೈ 2017 (19:14 IST)
ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನದ ಘನತೆ ಗೌರವ ಮರೆತು ಮನೆಹಾಳ ಎಂದು ಜರಿದಿರುವುದು ಸರಿಯಲ್ಲ. ಅವರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದೇನೆ ಎಂದು ಬಿಜೆಪಿ ಮುಖಂಡ ಎನ್‌.ಆರ್.ರಮೇಶ್ ಹೇಳಿದ್ದಾರೆ. 
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಹಗರಣಗಳನ್ನು ಬಯಲು ಮಾಡುತ್ತಿರುವುದಕ್ಕೆ ಕೋಪಗೊಂಡು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ವಿರುದ್ಧ ನಗರದ 3ನೇ ಎಸಿಎಂಎಂ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ. 
 
ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಘನತೆಯನ್ನು ಮರೆತು ಬಿಜೆಪಿ ಮುಖಂಡರಿಗೆ ಅಸಭ್ಯ ಪದಗಳನ್ನು ಬಳಕೆ ಮಾಡುತ್ತಿರುವುದು ನೋವಿನ ಸಂಗತಿ ಎಂದು ಬಿಜೆಪಿ ಮುಖಂಡ ಎನ್‌.ಆರ್.ರಮೇಶ್ ಬೇಸರ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ