‌‌ಬಿಜೆಪಿ ನಾಯಕಿ ಮಂಜುಳ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣು

Sampriya

ಮಂಗಳವಾರ, 11 ಮಾರ್ಚ್ 2025 (19:10 IST)
Photo Courtesy X
ಬೆಂಗಳೂರು: ಬಿಜೆಪಿ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿ ಮಂಜುಳ ಎಂಬುವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ.

ಮೂಲಗಳ ಮಾಹಿತಿ ಪ್ರಕಾರ, ಬಿಜೆಪಿ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದ ಮಂಜುಳಾ ಅವರು ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಧ್ಯಾಹ್ನ 2:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ
ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಮಂಜುಳಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ