ಶಿವಬಾಳ ನಗರ ಗ್ರಾಮದ ಹೊರವಲಯಲ್ಲಿ ಈ ಕೃತ್ಯ ನಡೆದಿದ್ದು ಮೊದಲು ಇದೊಂದು ಅಪಘಾತ ಎಂದು ಬಗೆಯಲಾಗಿತ್ತು. ಬಳಿಕ ಹತ್ಯೆ ಎಂಬುದು ಅರಿವಿಗೆ ಬಂದಿದೆ. ಮೃತ ಮಹಾದೇವ್ ಕಾಳೆ (50) ಉಪ್ಪರವಾಡಿ ಗ್ರಾಮದ ನಿವಾಸಿಯಾಗಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರಬಹುದೆಂದು ಪೊಲೀಸರು ಹೇಳುತ್ತಿದ್ದಾರೆ.
ಕಾಳೆ ಮಣ್ಣೂರ್ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರಾಗಿದ್ದರು. ಮತ್ತವರ ಪತ್ನಿ ವಂದನಾ ಹಾಲಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ.
ಮೃತರ ಕುಟುಂಬಸ್ಥರು ಅಫಜಲ್ಪುರ ಪೊಲೀಸ್ ಠಾಣೆಯಲ್ಲಿ ಕೊಲೆ ದೂರು ದಾಖಲಿಸಿದ್ದು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
ಘಟನೆ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ