ಉಮೇಶ್ ಜಾಧವ್ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗುವುದು ಖಚಿತ ಎಂದ ಬಿಜೆಪಿ ಮುಖಂಡ

ಶನಿವಾರ, 9 ಫೆಬ್ರವರಿ 2019 (13:07 IST)
ಯಾದಗಿರಿ : ಸೋಮವಾರದೊಳಗೆ ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗುದು ಖಚಿತ’ ಎಂದು ಮಾಜಿ ಸಚಿವ ಬಾಬೂರಾವ್ ಚಿಂಚನಸೂರು ಹೇಳಿದ್ದಾರೆ.


ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಮುಂದಿನ ಲೋಕಸಭಾ ಚುನಾವಣೆಗೆ ಚಿಂಚೊಳಿ ಶಾಸಕ ಉಮೇಶ್ ಜಾಧವ್ ಬಿಜೆಪಿ ಅಭ್ಯರ್ಥಿಯಾಗಿರುತ್ತಾರೆ. ಜಾಧವ್ ಅವರು ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆ ಮಾತನಾಡಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಕೀರ್ತಿ ಪತಾಕೆ ಹಾರಿಸೋದೆ ನಮ್ಮ ಗುರಿಯಾಗಿದೆ’ ಎಂದು ಹೇಳಿದ್ದಾರೆ.


‘ಉಮೇಶ್ ಜಾಧವ್ ಅವರು ರಾಜೀನಾಮೆ ನೀಡಿಯೇ ನೀಡುತ್ತಾರೆ. ಜಾಧವ್ ಅವರನ್ನು ಅನರ್ಹಗೊಳಿಸಿದ್ರೆ ನಮಗೂ ಕಾನೂನು ಗೊತ್ತು. ಮುಂದಿನ ವಾರ ಬಿಎಸ್ ಯಡಿಯೂರಪ್ಪ ಗುರುಮಠಕಲ್ ಕ್ಷೇತ್ರಕ್ಕೆ ಬರುತ್ತಾರೆ’ ಎಂದು ಅವರು ಹೇಳಿದ್ದಾರೆ.


ಈಗಾಗಲೇ ಸಿಎಂ ಕುಮಾರಸ್ವಾಮಿ ರಾಜ್ಯ ಉಗ್ರಾಣ ನಿಗಮಕ್ಕೆ ಉಮೇಶ್ ಜಾಧವ್ ನೇಮಕಾತಿಯನ್ನ ರದ್ದು ಪಡಿಸಿ ಅವರ ಬದಲಿಗೆ ಉಗ್ರಾಣ ನಿಗಮಕ್ಕೆ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್‍ರನ್ನ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಅಲ್ಲದೇ ಫೆಬ್ರವರಿ 17ರಂದು ಕಲಬುರಗಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಸಮ್ಮುಖದಲ್ಲೇ ಜಾಧವ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬುದಾಗಿ  ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ