ಕಾಂಗ್ರೆಸ್‌ನವರದ್ದು ಅಸತ್ಯಮೇವ ಜಯತೇ: ಸುರೇಶ್ ಕುಮಾರ್

ಗುರುವಾರ, 23 ಫೆಬ್ರವರಿ 2017 (16:58 IST)
ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗುತ್ತಿದೆ ಎನ್ನುವುದನ್ನು ವಿರೋಧಿಸಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೇ ರ್ಯಾಲಿ, ನಿಜವಾಗಿಯೂ ಅಸತ್ಯಮೇವ ಜಯತೇ ರ್ಯಾಲಿಯಂತೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.
 
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರ್ಯಾಲಿ ಮೂಲಕ ಸತ್ಯಕ್ಕೆ ಅಪಚಾರ ಮಾಡಿದೆ. ಅರ್ಕಾವತಿ ಡಿನೋಟಿಫಿಕೇಶನ್ ಮಾಡಿದಂತಹ ಕಾಂಗ್ರೆಸ್ ಪಕ್ಷದಿಂದ ರ್ಯಾಲಿ ನಡೆದಿದೆ. ರ್ಯಾಲಿಯಲ್ಲಿ ಅಸತ್ಯವನ್ನು ಊಣ ಬಡಿಸಲಾಗಿದೆ ಎಂದು ಕಿಡಿಕಾರಿದರು.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಸಿಎಂ ಮಾಡಲ್ಲ ಎಂದು ಕಾಂಗ್ರೆಸ್ ಹೇಳಿಕೆ ನೋಡಿದರೆ, ಕಾಂಗ್ರೆಸ್ ಪಕ್ಷಕ್ಕೆ ಒಳಗೊಳಗೆ ಭೀತಿ ಎದುರಾಗಿದೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ಭ್ರಷ್ಟಾಚಾರವನ್ನು ಬೆಂಬಲಿಸುತ್ತಿರುವಂತೆ ಕಂಡು ಬರುತ್ತಿದೆ. ಇಲ್ಲವಾದಲ್ಲಿ ಐಟಿ ದಾಳಿಗೊಳಗಾದ ಸಚಿವ ರಮೇಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಾಸಕ ಎಂಟಿಬಿ ನಾಗರಾಜ್ ಅವರ ರಾಜೀನಾಮೆ ಪಡೆದು ತೋರಿಸಲಿ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಸುರೇಶ್ ಕುಮಾರ್ ಸವಾಲ್ ಹಾಕಿದರು  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ