ಡಿಕೆಶಿ ಕಾರ್ಯವೈಖರಿಯನ್ನು ಹಾಡಿಹೊಗಳಿದ ಬಿಜೆಪಿ ನಾಯಕರು!

geetha

ಶುಕ್ರವಾರ, 5 ಜನವರಿ 2024 (18:02 IST)
ಬಿಜೆಪಿ ನಾಯಕರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಪ್ರಶಂಸಿಸಿದ ಘಟನೆ ಶುಕ್ರವಾರ ಯಲಹಂಕದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ನಡೆದಿದೆ. ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಹಾಗೂ ದಾಸರಹಳ್ಳಿ ಶಾಸಕ ಮುನಿರಾಜು ಡಿಕೆಶಿ ಕಾರ್ಯವೈಖರಿಯ ಬಗ್ಗೆ ಮುಕ್ತಕಂಠದಿಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 
 
ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅಹರ್ನಿಶಿ ಶ್ರಮಿಸುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿನ ಬಹುತೇಕ ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ಬಿಡಿಎ ಮಾಜಿ ಅಧ್ಯಕ್ಷ, ಶಾಸಕ ಎಸ್‌.ಆರ್‌ ವಿಶ್ವನಾಥ್‌ ಹೇಳಿದ್ದಾರೆ. ಜೊತೆಗೆ ಡಿಕೆಶಿ ಕಾಲಿಗೆ ಚಕ್ರ ಕಟ್ಟಿಕೊಂಡವರ ರೀತಿಯಲ್ಲಿ ಸಕ್ರಿಯವವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದೂ ಸಹ ಪ್ರಶಂಸೆ ಮಾಡಿದ್ದಾರೆ. 
 
ಒಂದೆಡೆ ಬಿಜೆಪಿ ನಾಯಕರು ಕರಸೇವಕರ ಬಂಧನ ಖಂಡಿಸಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿರುವಾಗ ಈ ಇಬ್ಬರು ನಾಯಕರ ಹೇಳಿಕೆ ಎಲ್ಲರ ಹುಬ್ಬೇರಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ