ಬಿಜೆಪಿಯವರು ಮೊದಲೇ ಹಣ ಟ್ರಾನ್ಸ್‌ಫರ್ ಮಾಡಿಕೊಂಡಿದ್ದಾರೆ: ಎಚ್‌.ಸಿ.ಮಹಾದೇವ್ ಪ್ರಸಾದ್

ಸೋಮವಾರ, 14 ನವೆಂಬರ್ 2016 (18:18 IST)
500, 1000 ರೂಪಾಯಿ ನೋಟು ಬ್ಯಾನ್ ಮಾಡುವ ವಿಚಾರ ತಿಳಿದುಕೊಂಡ ಬಿಜೆಪಿಯವರು ಮೊದಲೇ ಹಣ ಟ್ರಾನ್ಸ್‌ಫರ್ ಮಾಡಿಕೊಂಡಿದ್ದಾರೆಂದು ಹೇಳಬೇಕಾಗುತ್ತದೆ ಎಂದು ಸಹಕಾರ ಸಚಿವ ಎಚ್‌.ಸಿ.ಮಹಾದೇವ್ ಪ್ರಸಾದ್ ಟಾಂಗ್ ನೀಡಿದ್ದಾರೆ.
 
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿನ ಕಪ್ಪು ಹಣ ಹೊರತೆಗೆಯುವ ಉದ್ದೇಶದಿಂದ ಕೇಂದ್ರ ಸರಕಾರ 500, 1000 ರೂಪಾಯಿ ನೋಟುಗಳನ್ನು ಬ್ಯಾನ್ ಮಾಡಿದೆ. ಆದರೆ, ಏಕಾಏಕಿ ನೋಟು ಬ್ಯಾನ್ ಮಾಡಿದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ರೀತಿ ತೊಂದರೆ ಸರಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕ್ರಮ ಕೈಗೊಳ್ಳುತ್ತದೆ ಎಂಬ ನಿರೀಕ್ಷೆ ಇದೆ ಎಂದು ಹೇಳಿದರು. 
 
ಮಾಜಿ ಶಾಸಕ ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರ ರಾಜಕೀಯ ನಡೆಯನ್ನು ಗೌಪ್ಯವಾಗಿಟ್ಟಿದ್ದಾರೆ. ಆದರೆ, ನಂಜನಗೂಡಿನಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ