ಬಿಜೆಪಿ ನಾಯಕತ್ವ ವಿಫಲವಾಗಿದೆ- ಡಿಕೆಶಿ

ಶನಿವಾರ, 21 ಜನವರಿ 2023 (15:02 IST)
ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿದ್ದು,ಅಮಿತ್ ಶಾ ಅವರು ಮೊದಲು ಬೊಮ್ಮಾಯಿ ಅವರ ನೇತತ್ವದಲ್ಲಿ ರಾಜ್ಯ ಚುನಾವಣೆ ಎದುರಿಸಲಾಗುವುದು ಎಂದು ಹೇಳಿದ್ರು. ಆದರೆ ಈಗ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಆ ಮೂಲಕ ರಾಜ್ಯ ನಾಯಕತ್ವ ವಿಫಲವಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. 
ನಾವು ಜನರ ಭಾವನೆ ಅರಿತು ಪ್ರಜಾಧ್ವನಿ ಕಾರ್ಯಕ್ರಮ ಘೋಷಣೆ ಮಾಡಿದ್ದೇವೆ. ಅದಾದ ನಂತರ ಬಿಜೆಪಿಯವರು ನಾವು ಕೂಡ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕಳೆದ ಮೂರೂವರೆ ವರ್ಷಗಳಿಂದ ಅಧಿಕಾರದಲ್ಲಿ ಇದ್ದರೂ ಯಾಕೆ ಮಾಡಲಿಲ್ಲ? ನಾವು ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುವುದು ಎಂದು ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿದ್ದೇವೆ. ಇನ್ನು ಎರಡನೇ ಗ್ಯಾರೆಂಟಿ ಯೋಜನೆ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಮಹಿಳೆಯರಿಗೆ ನೆರವಾಗಲು ಮನೆಯೊಡತಿಗೆ ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದೇವೆ.  ಈ ಯೋಜನೆ ಎಲ್ಲರಿಗೂ ಅನ್ವಯ ಆಗುತ್ತದೆ. ಕೆಲವರು ಈ ಸೌಲಭ್ಯ ಬೇಡ ಎಂದರೆ ನಾವು ಏನೂ ಮಾಡಲು ಸಾಧ್ಯವಿಲ್ಲ  ಎಂದು ಡಿಕೆ ಶಿವಕುಮಾರ್ ಹೇಳಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ