ರಾಹುಲ್ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ದೂರು

Krishnaveni K

ಶನಿವಾರ, 21 ಸೆಪ್ಟಂಬರ್ 2024 (12:03 IST)
ಬೆಂಗಳೂರು: ಅಮೆರಿಕಾ ಪ್ರವಾಸದಲ್ಲಿ ಮೀಸಲಾತಿ ಬಗ್ಗೆ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಯೋಗ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾನತೆ ಇದೆ ಎಂದಾದರೆ ಮೀಸಲಾತಿ ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಅಮೆರಿಕಾ ಪ್ರವಾಸದಲ್ಲಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಭಾರೀ ಟೀಕೆಗೊಳಗಾಗಿತ್ತು. ಇದನ್ನೇ ಅಸ್ತ್ರವಾಗಿ ಬಳಸಿಕೊಂಡ ಬಿಜೆಪಿ, ಕಾಂಗ್ರೆಸ್ ಮೀಸಲಾತಿ ವಿರೋಧಿ ಎಂಬುದು ಇದರಲ್ಲೇ ಸ್ಪಷ್ಟವಾಗುತ್ತದೆ ಎಂದಿತ್ತು.

ಇದು ಇಷ್ಟಕ್ಕೇ ನಿಲ್ಲದೇ ರಾಹುಲ್ ವಿರುದ್ಧ ಪ್ರತಿಭಟನೆಯನ್ನೂ ನಡೆಸಿತ್ತು. ರಾಜ್ಯದಲ್ಲೂ ಬಿಜೆಪಿ ಮತ್ತು ಜೆಡಿಎಸ್ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ ನಡೆಸಿತ್ತು. ಇದೀಗ ವಿಧಾನಪರಿಷತ್ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಸಪರಿಷತ್ ಸದಸ್ಯ ಎನ್. ರವಿಕುಮಾರ್ ನೇತೃತ್ವದ ನಿಯೋಗ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದೆ.

ತಮ್ಮ ಹೇಳಿಕೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗುತ್ತಿದ್ದಂತೇ ರಾಹುಲ್ ಮತ್ತು ಕಾಂಗ್ರೆಸ್ ನಾಯಕರು ಸ್ಪಷ್ಟನೆಯನ್ನೂ ನೀಡಿದ್ದರು. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸಮಾನತೆ ಬಂದಾಗ ಮೀಸಲಾತಿ ರದ್ದು ಮಾಡುವ ಬಗ್ಗೆ ಚಿಂತನೆ ನಡೆಸುವುದಾಗಿ ಹೇಳಿದ್ದೆ. ಆದರೆ ಇದನ್ನು ಬಿಜೆಪಿಯವರು ತಪ್ಪಾಗಿ ಸಂದೇಶ ನೀಡುತ್ತಿದ್ದಾರೆ ಎಂದಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ