ಬಿಜೆಪಿ ಸೋಲಿಗೆ ಕಾರ್ಯಕರ್ತರೇ ಹೊಣೆ: ಯಡಿಯೂರಪ್ಪ.

ಶುಕ್ರವಾರ, 14 ಏಪ್ರಿಲ್ 2017 (17:53 IST)
ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರ್ಯಕರ್ತರೇ ಹೊಣೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 
 
ಬಿಜೆಪಿ ಪಕ್ಷ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು. ಬಿಜೆಪಿ ಪಕ್ಷದಲ್ಲಿ ದಲಿತರ ಓಣಿಯಲ್ಲಿ ನಿಂತು ಕಾರ್ಯನಿರ್ವಹಿಸುವ ಪಡೆಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಅಂಬೇಡ್ಕರ್ ಚಿಂತನೆಗಳ ಮೇಲೆ ಕಾರ್ಯನಿರ್ವಹಿಸಬೇಕಾಗಿದೆ. ಉಪಚುನಾವಣೆ ನಡೆದ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳು ಬಿಜೆಪಿಯ ಮೂಲ ಕ್ಷೇತ್ರಗಳಲ್ಲ. ಸೋಲಿನಿಂದ ಎದೆಗುಂದಬೇಕಾಗಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ ಎಂದರು.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಉಪಚುನಾವಣೆ ನಡೆದ ಎರಡೂ ಕ್ಷೇತ್ರಗಳಲ್ಲಿ ಹಣ, ಅಧಿಕಾರಬಲದಿಂದ ಚುನಾವಣೆಯಲ್ಲಿ ಜಯಗಳಿಸಿದೆ ಎಂದು ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ