ಉಡುಪಿ ಪ್ರಕರಣ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ಹಿಂದೂ ಮಹಿಳೆಯ ಖಾಸಗಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಗಿದೆ.ತಲೆಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಬಿಜೆಪಿ ಮುಖಂಡರು ಸಿದ್ದರಾಗಿದ್ದು,ಆರೋಪಿಗಳಾದ ಮೂವರು ಮಹಿಳೆಯರಿಗೆ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದಾರೆ.ಮಾಜಿ ಸಚಿವ ಅಶ್ವಥ್ ನಾರಾಯಣ, ಎಂ ಎಲ್ ಸಿ ತೇಜಶ್ವಿನಿ ಗೌಡ, ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.ಪ್ರತಿಭಟನೆಗೆ ಎಂ ಎಲ್ ಸಿ ರವಿಕುಮಾರ್, ಮಹಿಳಾ ಮೋರ್ಚಾ ಪ್ರತಿನಿಧಿಗಳು ಆಗಮಿಸಿದ್ದಾರೆ.