ಕಾವೇರಿ ರಕ್ಷಣಾ ಯಾತ್ರೆ ನಡೆಸಲು ಮುಂದಾದ ಬಿಜೆಪಿ

ಶುಕ್ರವಾರ, 15 ಸೆಪ್ಟಂಬರ್ 2023 (14:00 IST)
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಕಾವೇರಿ ರಕ್ಷಣಾ ಯಾತ್ರೆ ನಡೆಸಲು ಬಿಜೆಪಿ ಮುಂದಾಗಿದೆ.ಈ ಸಂಬಂಧ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆಸಲಾಗಿದೆ.ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಕಾವೇರಿ ರಕ್ಷಣಾ ಯಾತ್ರೆ ನಡೆಸುವ ಸಂಬಂಧ ಚರ್ಚೆ ನಡೆಸಲಾಗಿದೆ.ಕಾವೇರಿ ಕೊಳ್ಳದ 6 ಜಿಲ್ಲೆಗಳ ಬಿಜೆಪಿ ಸಂಸದರು, ಶಾಸಕರು, ಪಕ್ಷದ ಮುಖಂಡರ ಸಭೆ ನಡೆಸಲಾಗಿದೆ.ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಹಾಸನ ಜಿಲ್ಲೆಗಳ ಜನಪ್ರತಿನಿಧಿಗಳು, ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ.
 
ಮೂರು ತಂಡಗಳಲ್ಲಿ  ಬಿಜೆಪಿ ನಾಯಕರು ಪ್ರವಾಸ ಮಾಡಲಿದ್ದಾರೆ.ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪರಿಷತ್ ಸದಸ್ಯ ಸಿ ಪಿ ಯೋಗೀಶ್ವರ್, ಶಾಸಕ ಸಿ.ಎನ್.ಅಶ್ವಥ್ ನಾರಾಯಣ, ಮಾಜಿ ಶಾಸಕ ಎನ್ ಮಹೇಶ್, ಸಂಸದ ಪಿ ಸಿ ಮೋಹನ್, ಸಂಸದ ಡಿವಿ ಸದಾನಂದಗೌಡ, ಗೋವಿಂದ ಕಾರಜೋಳ ಸೇರಿ ಹಲವರು ಭಾಗಿಯಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ