ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ. ಅವರ ಬಳಿ ಸಾಕ್ಷ್ಯಾಧಾರಗಳು ಇದ್ದರೆ ಸರಕಾರಕ್ಕೆ ನೀಡಲಿ ಎಂದರು.
ಅಮ್ನೆಸ್ಟಿ ಇಂಡಿಯಾ ಸಂಸ್ಥೆಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ನಮಗೂ ರಾಷ್ಟ್ರೀಯತೆಯ ಮೇಲೆ ಗೌರವ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಯನ್ನು ತಿರುಚಲಾಗಿದೆ. ಭಾರತೀಯ ಜನತಾ ಪಾರ್ಟಿ ಫ್ಯಾಸಿಸ್ಟ್ ಸಂಸ್ಕೃತಿ ಅನುಸರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದರು.