ಇನ್ನು ಮೂರು ತಿಂಗಳಲ್ಲಿ ರಾಜ್ಯಕ್ಕೆ ಹೊಸ ಸಿಎಂ!
ತಮ್ಮದೇ ಬೆಂಬಲದೊಂದಿಗೆ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ದೇವೇಗೌಡರು ಸಿದ್ದರಾಮಯ್ಯಗೇ ಅವಮಾನ ಮಾಡುತ್ತಿದ್ದಾರೆ. ಇದನ್ನು ನೋಡಿ ಸ್ವತಃ ಸಿದ್ದರಾಮಯ್ಯ ಅವರೇ ಈ ಸರ್ಕಾರವನ್ನು ಪತನಗೊಳಿಸಲಿದ್ದಾರೆ ಎಂದು ಯತ್ನಾಳ್ ಹೇಳಿಕೊಂಡಿದ್ದಾರೆ.
ಇದಾದ ಬಳಿಕ ಬಿಎಸ್ ವೈ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕ ಜನ ನನಗೆ ಮತ ಹಾಕಿಲ್ಲ ಎಂದು ಸಿಎಂ ಕುಮಾರಸ್ವಾಮಿ ಈ ಭಾಗದ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.