ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

ಸೋಮವಾರ, 23 ಡಿಸೆಂಬರ್ 2019 (11:00 IST)
ಚಿತ್ರದುರ್ಗ : ಬಿಜೆಪಿ ವಿರುದ್ದ ಸಿಡಿದೆದ್ದ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮುಂದಿನ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.ಹೊಸದುರ್ಗದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ನಾನೊಬ್ಬ ಶಾಸಕನಾದರೂ ಬಿಜೆಪಿ ನನ್ನನ್ನು ಕಡೆಗಣಿಸುತ್ತಿದೆ. ಹೊಸದುರ್ಗದ ಬಿಜೆಪಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ನಾಮಕಾವಸ್ಥೆಗೂ ಸಹ ಶಾಸಕರ ಅಭಿಪ್ರಾಯವನ್ನು ಕೇಳಿಲ್ಲ. ಬಿಜೆಪಿ ನಾಯಕರ ಕಪಿಮುಷ್ಠಿಯಲ್ಲೇ ಇರಲಿ ಅಂತ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಹಾಗೇ ತೆರೆಮರೆಯಲ್ಲಿ ಅತೀ ಬೇಗ ಶಾಸಕರಾಗುವ ಬಯಕೆಯುಳ್ಳ ತಾಲೂಕಿನ ಬಿಜೆಪಿ ನಾಯಕರು ನನ್ನ ವಿರುದ್ಧ ಷಡ್ಯಂತ್ರ  ನಡೆಸುತ್ತಿದ್ದು, ಪಕ್ಷದ ವರಿಷ್ಠರಲ್ಲಿ ತನ್ನ ಬಗ್ಗೆ ದೂರು ನೀಡುತ್ತಿದ್ದಾರೆ. ಅವರಿಗೆ ಶಾಸಕರಾಗಲು ಅಷ್ಟೋಂದು ಬಯಕೆ ಇದ್ದರೆ ನನ್ನ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ ಅಂತ ಸವಾಲು ಹಾಕಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ