ಸಿಎಂ ವಿರುದ್ಧ ಏಕವಚನದಲ್ಲಿ ವಾಗ್ದಾಳಿ: ಬಿಜೆಪಿ ಶಾಸಕನಿಗೆ ಷರತ್ತುಬದ್ಧ ಜಾಮೀನು

ಶನಿವಾರ, 11 ನವೆಂಬರ್ 2017 (18:26 IST)
ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ದೂರು ದಾಖಲಾಗಿದ್ದು, ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.
ಸಿಎಂ ವಿರುದ್ಧ ಏಕವಚನ ಪ್ರಯೋಗಿಸಿದ್ದಲ್ಲದೇ,ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
 
ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಲ್ಲದೇ ಹಿಂದುಗಳಿಗಾಗಿ ಖಡ್ಗ ಹಿಡಿಯಲು ಸಿದ್ದ ಎಂದು ಘೋಷಿಸಿದ್ದರು. ಪ್ರಚೋದನಾಕಾರಿ ಭಾಷಣದ ವಿರುದ್ಧ ಕಾಂಗ್ರೆಸ್ ಮುಖಂಡರು ಶಾಸಕ ಪಾಟೀಲ್ ವಿರುದ್ಧ ದೂರು ದಾಖಲಿಸಿದ್ದರು.
 
ದೂರಿನ ಹಿನ್ನೆಲೆಯಲ್ಲಿ ಶಾಸಕ ಸಂಜಯ್ ಪಾಟೀಲ್ ಕೋರ್ಟ್‌ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ