ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ. ಈ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

ಸೋಮವಾರ, 7 ಜನವರಿ 2019 (11:37 IST)
ಶಿವಮೊಗ್ಗ : ಮರಳು ದಂಧೆ ನೆಪದಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು ಸುಳ್ಳು ಕೇಸ್ ದಾಖಲಿಸಿದ್ದಾರೆಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.


ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ನಿನ್ನೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಕಣ್ಣಿಗೆ ಪೆಟ್ರೋಲ್ ಹೋಗಿದ್ದ ಪರಿಣಾಮ ಶಂಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಶಾಸಕರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಎಂದು ಹೇಳಿದ್ದಾರೆ.


‘ಅಕ್ರಮ ಮರಳು ದಂಧೆ ವಿರುದ್ಧ ಹೋರಾಡಿದ್ದಕ್ಕೆ ಪೊಲೀಸರು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ಒಬ್ಬ ಶಾಸಕರ ಸ್ಥಿತಿಯೇ ಹೀಗಾದರೆ ಸಾಮಾನ್ಯ ಜನರ ಪರಿಸ್ಥಿತಿ ಏನು? ಕಾಂಗ್ರೆಸ್ ಏಜೆಂಟರೇ ಮರಳು ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ