ಜೈನಿ ಮುನಿಯ ಹತ್ಯೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆ
ಜೈನ ಮುನಿಯ ಹತ್ಯೆ ಖಂಡಿಸಿ ಬಿಜೆಪಿ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ರು.ರಾಜ್ಯದಲ್ಲಿ ಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಿದ್ದಾರೆ.ಅಲ್ಲದೇ ಜೈನ್ ಮುನಿಗಳ ಹತ್ಯೆಯನ್ನ ಸಿಬಿಐ ಗೆ ಕೊಡುವಂತೆ ಒತ್ತಾಯ ಮಾಡಿದ್ದು,ಟಿ . ನರಸೀಪುರ ದಲ್ಲಿ ನಡೆದ ಹತ್ಯೆ ಪ್ರಕರಣವನ್ನ ಉನ್ನತ ಮಟ್ಟದ ತನಿಖೆ ವಹಿಸುವಂತೆ ಒತ್ತಾಯ ಮಾಡಿದ್ದಾರೆ.ಇನ್ನೂ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಶಾಸಕರಾದ ಆರ್ ಅಶೋಕ್, ಅಶ್ವಥ್ ನಾರಾಯಣ್, ಸುನಿಲ್ ಕುಮಾರ್, ಆರಗ ಜ್ಞಾನೇಂದ್ರ, ಯತ್ನಾಳ್ ಸೇರಿದಂತೆ ಎಲ್ಲಾ ಶಾಸಕರು ಭಾಗಿಯಾಗಿದ್ದಾರೆ.